Kannada NewsKarnataka NewsLatestPolitics

*ಕಾಂಗ್ರೆಸ್ ಮುಖಂಡರು-ಕಾರ್ಯಕರ್ತರ ನಡುವೆ ಮಾರಾಮಾರಿ*

ಪ್ರಗತಿವಾಹಿನಿ ಸುದ್ದಿ: ಭೂತ್ ಮಟ್ಟದ ಕಾಂಗ್ರೆಸ್ ಸಭೆಯ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನಡುವೆಯೇ ಗಲಾಟೆ ನಡೆದು, ಹೊಡೆದಾಡಿಕೊಂಡಿರುವ ಘಟನೆ ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ.

ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ಗಲಾಟೆಯಾಗಿದ್ದು, ಕಚೇರಿಯಲ್ಲಿಯೇ ಹೊಡೆದಾಡಿಕೊಂಡಿದ್ದಾರೆ.

Home add -Advt

ಸಭೆ ನಡೆಯುತ್ತಿದ್ದ ವೇಳೆ ಕೊತ್ತೂರು ಮಂಜುನಾಥ್ ಬೆಂಬಲಿಗರು ಕೋಲಾರ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಶ್ರೀನಿವಾಸ್ ಮೇಲೆ ಏಕಾಏಕಿ ದಾಳಿ ನಡೆಸಿ ಹಲ್ಲೆ ಮಾಡಿದ್ದಾರೆ.

ಈ ವೇಳೆ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಕೈಕೈ ಮಿಲಾಯಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.


Related Articles

Back to top button