
ಪ್ರಗತಿವಾಹಿನಿ ಸುದ್ದಿ; ವಾರಣಾಸಿ: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಮಸೀದಿಯಲ್ಲಿ ವೈಜ್ಞಾನಿಕ ಸರ್ವೆಗೆ ಅವಕಾಶ ನೀಡಿ ತೀರ್ಪು ಪ್ರಕಟಿಸಿದೆ.
ಕಾಶಿ ವಿಶ್ವನಾಥ ಮಂದಿರದ ಆವರಣದಿಲ್ಲಿರುವ ಜ್ಞಾನವಾಪಿ ಮಸೀದಿಯ ಒಳಗೆ ಭಾರತೀಯ ಪುರಾತತ್ವ ಇಲಾಖೆ ಸರ್ವೆ ನಡೆಸಿ ಆಗಸ್ಟ್ 4ರೊಳಗೆ ವರದಿ ಸಲ್ಲಿಸುವಂತೆ ಕೋರ್ಟ್ ಆದೇಶ ನೀಡಿದೆ.
ಜ್ಞಾನವಾಪಿ ಮಸೀದಿ ಆವರಣದಲ್ಲಿ ಹಿಂದೂ ದೇವರ ವಿಗ್ರಹಗಳಿವೆ ಸಮೀಕ್ಷೆ ನಡೆಸಬೇಕು ಎಂದು ಕೋರಿ ಐವರು ಹಿಂದೂ ಮಹಿಳೆಯರು ಕೋರ್ಟ್ ಮೆಟ್ಟಿಲೇರಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಸರ್ವೆ ಆಫ್ ಇಂಡಿಯಾಗೆ ಸಮೀಕ್ಷೆ ನಡೆಸಲು ಅನುಮತಿ ನೀಡಿದೆ. ಸಮೀಕ್ಷೆ ವೇಳೆ ಸ್ಥಳದಲ್ಲಿನ ಯಾವುದೇ ವಸ್ತುಗಳಿಗೂ ಹಾನಿಯಾಗದಂತೆ ಎಚ್ಚರವಹಿಸುವಂತೆ ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ