Kannada NewsKarnataka NewsLatestPolitics

*ಅಮಾಯಕ ಸೈನಿಕರನ್ನು ಬಲಿಕೊಟ್ಟ ಕೀರ್ತಿ ಪ್ರಧಾನಿ ಮೋದಿ ಸರ್ಕಾರಕ್ಕೆ ಸಲ್ಲುತ್ತೆ; ಶಾಸಕ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ; ರಾಮನಗರ: ಬಿಜೆಪಿಯವರು ಬ್ರಿಟಿಷರು ಇದ್ದಂತೆ. ಅಮಾಯಕ ಸೈನಿಕರನ್ನು ಬಲಿಕೊಟ್ಟ ಕೀರ್ತಿ ಮೋದಿ ಸರ್ಕಾರಕ್ಕೆ ಸಲ್ಲುತದೆ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಾಗಡಿಯಲ್ಲಿ ಮಾತನಾಡಿದ ಶಾಸಕ ಬಾಲಕೃಷ್ಣ, ಬಿಜೆಪಿಯವರು ಬ್ರಿಟೀಷರಿದ್ದಂತೆ. ಯಾರು ಪ್ರಬಲರಾಗಿರುತ್ತಾರೆ ಅವರ ಮಧ್ಯೆ ಗುಂಪು ಕಟ್ಟಿ ಒಡೆದಾಳುವ ನೀತಿ ಅನುಸರಿಸುತ್ತಾರೆ. ದೇಶದಲ್ಲಿ ಅಮಾಯಕ ಸೈನಿಕರನ್ನು ಬಲಿಕೊಟ್ಟ ಕೀರ್ತಿ ಪ್ರಧಾನಿ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Home add -Advt

ದೇಶ ಆಳುವ ವ್ಯಕ್ತಿಗೆ ನಮ್ಮ ಸೈನಿಕರಿಗೆ ತೊಂದರೆ ಇದೆ ಎಂದು ಗೊತ್ತಿಲ್ಲವೇ? ಸೈನಿಕರಿಗೆ ಅಪಾಯವಿದೆ ಎಂಬುದನ್ನು ಸರ್ಕಾರಕ್ಕೆ ಹೇಳಲು ಸಾಧ್ಯವಿಲ್ಲ ಎಂದರೆ ಹೇಗೆ? ಬಲಿದಾನವಾಗಿದ್ದು ಸೈನಿಕರು. ಅಧಿಕಾರ ಬಂದಿದ್ದು ಮೋದಿಗೆ ಈ ಬಗ್ಗೆ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಹೆಚ್.ಸಿ.ಬಾಲಕೃಷ್ಣ ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.


Related Articles

Back to top button