Belagavi NewsBelgaum News

*ಸಿಎಂ ಬದಲಾವಣೆ; ಸಿದ್ದರಾಮಯ್ಯ ಆಪ್ತ, ಸಚಿವ ಹೆಚ್.ಸಿ.ಮಹದೇವಪ್ಪ ಹೇಳೋದೇನು?*

ಪ್ರಗತಿವಾಹಿನಿ ಸುದ್ದಿ: ಸಿಎಂ ಹುದ್ದೆ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಹೆಚ್.ಸಿ.ಮಹದೇವಪ್ಪ, ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯನವರಿಗೆ ಹೇಳಿದ ವಿಚಾರವಾಗಿ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಹೆಚ್.ಸಿ.ಮಹದೇವಪ್ಪ, ಹೈಕಮಾಂಡ್ ನವರು ವೀಕ್ಷಕರನ್ನು ಕಳುಹಿಸಿಯೇ ಎಲ್ಲವನ್ನೂ ತೀರ್ಮಾನಿಸಿ ಸಿದ್ದರಾಮಯ್ಯನವರನ್ನು ಸಿಎಂ ಮಾಡಿದ್ದಾರೆ. ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ ಅನಗತ್ಯ ಚರ್ಚೆ ಬೇಡ ಎಂದರು.

ಕಾಂಗ್ರೆಸ್ 5 ವರ್ಷ ಅಧಿಕಾರ ನಡೆಸಲು ಜನರು ಆಶಿರ್ವಾದ ಮಾಡಿದ್ದಾರೆ. ಶಾಸಕರ ಅಭಿಪ್ರಾಯದಿಂದ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿಯೇ ಸಿದ್ದರಾಮಯ್ಯನವರನ್ನು ಸಿಎಂ ಆಗಿ ಹೈಕಮಂಡ್ ನೇಮಕ ಮಾಡಿದೆ. ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಹೇಳಿದರು.

Home add -Advt


Related Articles

Back to top button