*ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ಮಾಳಗಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ ಶಿವಪುತ್ರಪ್ಪ ಚನ್ನಬಸಪ್ಪ ಮಾಳಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮರ್ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಪಕ್ಷದ ಬಾವುಟ ನೀಡಿ ಅವರನ್ನು ಕಾಂಗ್ರೆಸ್ ಗೆ ಬರಮಾಡಿಕೊಳ್ಳಲಾಯಿತು. 1985ರಲ್ಲಿ ಕಾಂಗ್ರೆಸ್ ನಿಂದ ಶಾಸಕರಾಗಿದ್ದ ಅವರು 1994, 1999ರಲ್ಲಿ ಜನತಾದಳ, ಸಂಯುಕ್ತ ಜನತಾದಳ ಸೇರ್ಪಡೆಯಾಗಿ ಶಾಸಕರಾಗಿದ್ದರು. ನಂತರದಲ್ಲಿ ನಡೆದ ಚುನಾವಣೆಗಳಲ್ಲಿ ಸೋಲನುಭವಿಸಿದ್ದರು. ಇದೀಗ ಅವರು ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.Home add -Advt … Continue reading *ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ಮಾಳಗಿ*