Kannada NewsKarnataka NewsLatest

*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಆರ್ ಐ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಂದಾಯ ಇನ್ಸ್ ಪೆಕ್ಟರ್ ಓರ್ವರು ಲಂಚ ಪಡೆಯುತ್ತಿದ್ದಗಲೇ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನ ಮಹದೇವಪುರದಲ್ಲಿ ನಡೆದಿದೆ.

ಮಹದೇವಪುರ ಆರ್.ಐ ವಸಂತ್ ಲೋಕಾಯುಕ್ತ ಬಲೆಗೆ ಬಿದ್ದವರು. ಕೃಷಿ ಭೂಮಿಗೆ ಖಾತೆ ಪೋಡಿ ಮಾಡಿಕೊಡಲು 28 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣವಾಗಿ ಈಗಾಗಲೇ 3.5 ಲಕ್ಷ ಹಣ ಹಾಗೂ 4 ಲಕ್ಷ ರೂಪಾಯಿ ಚೆಕ್ ಪಡೆದುಕೊಂಡಿದ್ದರು.

Home add -Advt

ಈಗ ಮತ್ತೆ 4 ಲಕ್ಷ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಸಂತ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ವಸಂತ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಇದೇ ವೇಳೆ ಲೋಕಾಯುಕ್ತ ಅಧಿಕಾರಿಗಳು ವಸಂತ್ ಅವರ ಮನೆ ಮೇಲೂ ದಾಳಿ ನಡೆಸಿ 9 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ. ದಾಖಲೆಗಳ ಪರಿಶೀಲನೆ ಮುಂದುವರೆದಿದೆ.


Related Articles

Back to top button