
ಪ್ರಗತಿವಾಹಿನಿ ಸುದ್ದಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಚೇತರಿಸಿಕೊಂಡಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ದೇವೇಗೌಡರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದೇವೇಗೌಡ ಅವರು ಇಂದು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ, ಮನೆಗೆ ತೆರಳಿದ್ದಾರೆ.