Kannada NewsKarnataka NewsLatestPolitics
*ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವರು, ಸಂಸದರು*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ನಾಯಕರು ಆಸ್ಪತ್ರೆಗೆ ತೆರಳಿ ದೇವೇಗೌಡರ ಆರೋಗ್ಯ ವಿಚಾರಿಸಿದರು.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ, ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಇದೇ ವೇಳೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದರು.