Karnataka NewsLatestPolitics

*ಮಣ್ಣಲ್ಲಿ ಮಣ್ಣಾದ ಹೆಚ್.ಡಿ.ದೇವೇಗೌಡರ ಪತ್ನಿ: ಚೆನ್ನಮ್ಮ ಇನ್ನು ನೆನಪು ಮಾತ್ರ*

ಪ್ರಗತಿವಾಹಿನಿ ಸುದ್ದಿ: ಉಸಿರಾಟದ ತೊಂದರೆ, ಹೃದಯಾಘಾತದಿಂದ ವಿಧಿವಶರಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬಳಿಯ ರಂಗನಾಥಸ್ವಾಮಿ ಬೆಟ್ಟದ ತಪ್ಪಿನಲ್ಲಿ ಹೆಚ್.ಡಿ.ದೇವೇಗೌಡ ಅವರ ಜಮೀನಿನಲ್ಲಿ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆಯನ್ನು ಒಕ್ಕಲಿಗ ಸಂಪ್ರದಾಯದಂತೆ ನೆರವೇರಿಸಲಾಯಿತು.

ಇದಕ್ಕೂ ಮುನ್ನ ಚೆನ್ನಮ್ಮ ಪಾರ್ಥೀವಶರೀರಕ್ಕೆ ರಾಜಕೀಯ ನಾಯಕರು, ಗಣ್ಯಾತಿ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವ ಕೃಷ್ಣಬೈರೇಗೌಡ, ಸಂಸದ ಮಂಜುನಾಥ್, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವಾ ಪ್ರಹ್ಲಾಅದ್ ಜೋಶಿ, ಶಿವರಾಜ್ ಚೌವ್ಹಾಣ್, ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸೊಸೆಯಂದಿರಾದ ಅನಿತಾ ಕುಮಾರಸ್ವಾಮಿ, ಭವಾನಿ ರೆವಣ್ಣ ಸೇರಿದಂತೆ ಹಲವರು ಚೆನ್ನಮ್ಮ ಅವರಿಗೆ ಪುಷ್ಪನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ಬಳಿಕ ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತಿರಿಸಿದರು. ಒಕ್ಕಲಿಗ ಸಂಪ್ರದಾಯದಂತೆ ವಿಧಿ-ವಿಧಾನಗಳು ನೆರವರೇದ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button