ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪುನರ್ ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳಬೇಕು ಈಗಾಗಲೇ ಹಲವು ರಾಜ್ಯಗಳು ಸಿಎಎ ಜಾರಿಗೆ ವಿರೋಧ ವ್ಯಕ್ತಪಡಿಸಿವೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸಲಹೆ ನೀಡಿದ್ದಾರೆ.
ಸಿಎಎ ಜಾರಿಗೆ ಕೇರಳ, ಪಂಜಾಬ್, ಪಶ್ಚಿಮ ಬಂಗಾಳ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಕೆಲ ರಾಜ್ಯಗಳು ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿವೆ. ಹೀಗಿರುವಾಗ ಕೇಂದ್ರ ಸರ್ಕಾರ ತನ್ನ ನಿರ್ಧಾರ ಬದಲಿಸುವುದು ಉತ್ತಮ ಎಂದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೆಲವು ನಿರ್ಧಾರಗಳು ದೇಶದ ಹಿತಾಸಕ್ತಿಗೆ ಧಕ್ಕೆಯುಂಟು ಮಾಡುತ್ತಿವೆ. ಸಿಎಎ, ಎನ್ಆರ್ಸಿ ಮತ್ತು ಎನ್ಪಿಆರ್ ದೇಶಾದ್ಯಂತ ಹೋರಾಟಗಳು ನಡೆಯುತ್ತಿವೆ. ಜೆಡಿಎಸ್ ಕೂಡ ಈ ಕಾನೂನಿನ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿದೆ. ಆದರೆ ಅದು ಎಂದಿಗೂ ಸಾಧ್ಯವಿಲ್ಲ. ಇದು ಪ್ರಜಾಪ್ರಭುತ್ವ ದೇಶ. ಇಲ್ಲಿ ಎಲ್ಲಾ ಧರ್ಮಗಳಿಗೂ ಸಮಾನ ಅವಕಾಶ ಹೊಂದಿವೆ. ಹೀಗಾಗಿ ಬಿಜೆಪಿ ಹಿಂದೂ ರಾಷ್ಟ್ರ ನಿರ್ಮಾಣ ಉದ್ದೇಶ ಈಡೇರುವುದಕ್ಕೆ ನಾವು ಬಿಡುವುದಿಲ್ಲ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ