ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೊಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಬೃಹತ್ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.
ಸಮಾವೇಶದಲ್ಲಿ ಮಾತನಾಡಿದ ಹೆಚ್.ಡಿ.ದೇವೇಗೌಡ, ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚೆಯಾಗಿದ್ದು ನಿಜ. ಮೋದಿಯವರೇ ಸಂಪರ್ಕ ಮಾಡಿದ್ದರು. ಮಾತುಕತೆಯಾಗಿದೆ. ಮೋದಿ ಅವರ ಬಳಿ ಪ್ರತಿಪಕ್ಷದ ಪರಿಸ್ಥಿತಿಯನ್ನು ವಿವರಿಸಿದ್ದೇನೆ ಎಂದು ತಿಳಿಸಿದ್ದಾರೆ.
ಎಷ್ಟು ಸೀಟು ಬೇಕು ಎಂದು ನಾವು ಕೇಳೋದಿಲ್ಲ. ಸೀಟು ಹಚಿಕೆ ಬಗ್ಗೆ ಮೋದಿ ಜೊತೆ ಕುಮರಸ್ವಾಮಿ ಮಾತನಾಡುತ್ತಾರೆ. ಜೆಡಿಎಸ್ ಗೆ ಶಕ್ತಿ ಇಲ್ಲ ಎಂದು ಬಿಜೆಪಿ ಭಾವಿಸಬಾರದು. ನಾನು ಪಕ್ಷ ಉಳಿಸಲು ದೆಹಲಿ ನಾಯಕರನ್ನು ಸಂಪರ್ಕ ಮಾಡಿದ್ದೇನೆ. ವಿಜಯಪುರ, ರಾಯಚೂರು, ಬೀದರ್ ನಲ್ಲಿ ನಮ್ಮ ಶಕ್ತಿ ಇದೆ. ಅಲ್ಲಿ ನಾವು ಬೆಂಬಲ ನೀಡಿದರೆ ಬಿಜೆಪಿ ಗೆಲುವು ಸಾಧ್ಯವಿದೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ