Latest

*ಮಾಜಿ ಪ್ರಧಾನಿ, JDS ವರಿಷ್ಠ ಹೆಚ್.ಡಿ.ದೇವೇಗೌಡರು ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾಲುನೋವಿನ ಚಿಕಿತ್ಸೆಗಾಗಿ ಹೆಚ್.ಡಿ.ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದ ವಾಪಸ್ ಆದ ಬಳಿಕ ಹಾಸನ ಜೆಡಿಎಸ್ ಅಭ್ಯರ್ಥಿ ಟಿಕೆಟ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ದೇವೇಗೌಡರ ಆರೋಗ್ಯ ಅಷ್ಟಾಗಿ ಉತ್ತಮವಾಗಿಲ್ಲ ಎಂದು ಕುಮಾರಸ್ವಾಮಿ ಎರಡು ದಿನಗಳ ಹಿಂದೆಯೇ ಹೇಳಿದ್ದರು. ಹಾಸನ ಜೆಡಿಎಸ್ ಟಿಕೆಟ್ ವಿಚಾರವಾಗಿ ದೇವೇಗೌಡರಿಗೆ ಹೆಚ್ಚಿನ ಹೊರೆ ನೀಡಲು ನನಗಿಷ್ಟವಿಲ್ಲ. ಅವರ ಆರೋಗ್ಯ ಮುಖ್ಯ ಎಂದು ಹೇಳಿದ್ದರು. ಆದರೂ ಅವರ ಸಮ್ಮುಖದಲ್ಲಿಯೇ ಹಾಸನ ಅಭ್ಯರ್ಥಿ ಆಯ್ಕೆ ನಿರ್ಧರಿಸಲಾಗುವುದು ಎಂದು ತಿಳಿಸಿದ್ದರು.

ಹೆಚ್.ಡಿ.ದೇವೇಗೌಡರು ಇಂದು ಬೆಳಿಗ್ಗೆ ಕಾಲು ನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Home add -Advt

*ಅಬಕಾರಿ ಟೆಂಡರ್ ಅವ್ಯವಹಾರ: ಕಾಂಗ್ರೆಸ್ ವಿವರ ನೀಡಲಿ: ಸಿಎಂ ಬೊಮ್ಮಾಯಿ*

https://pragati.taskdun.com/basavaraj-bommaiabakari-tendercm-basavaraj-bommai/

Related Articles

Back to top button