Kannada NewsKarnataka NewsLatestPolitics
*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯದ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.



