Kannada NewsKarnataka NewsLatestPolitics

*ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್ ಕೋರ್ ಕಮಿಟಿ ರಾಜ್ಯಾದ್ಯಂತ ಪ್ರವಾಸ; ಮಾಜಿ ಪ್ರಧಾನಿ H.D.ದೇವೇಗೌಡ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆ ನಿಟ್ಟಿನಲ್ಲಿ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ.

ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದೀಪ ಬೆಳಗಿದರು. ಬಳಿಕ ಮಾತನಾಡಿದ ಅವರು, ಪಕ್ಷ ಸಂಘಟನೆ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ. ನಮಗೆ ಯಾವ ಪಕ್ಷದ ಮೇಲು ದ್ವೇಷ ಇಲ್ಲ. ನಮ್ಮ ಪಕ್ಷವನ್ನು ಸಂಘಟಿಸಿ ಉಳಿಸಿ, ಬೆಳೆಸಬೇಕಿದೆ. ಆ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದರು.

ನಾನೂ ಕೂಡ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ಎರಡು ಪಕ್ಷಗಳ ನಡುವೆ ನಮ್ಮ ಪಕ್ಷವನ್ನು ಉಳಿಸುವ ಸಂಕಲ್ಪ ಮಾಡಿದ್ದೇನೆ. ಈ ದೇಶ ಹೇಗೆ ನಡೆಯುತ್ತಿದೆ ಎಂಬುದು ನನಗೆ ಗೊತ್ತಿದೆ. ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸದಸ್ಯರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ ಎಂದು ಹೇಳಿದರು.

Home add -Advt

ಪಕ್ಷದ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಬಿಎಮ್ ಫಾರೂಕ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಶ್ರೀ ಹೆಚ್.ಎಂ.ರಮೇಶ್ ಗೌಡ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಪ್ರುಲ್ಲಾ ಖಾನ್, ಪಕ್ಷದ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್, ಸಯ್ಯದ್ ಶಫಿ ಉಲ್ಲಾ, ಬಸವರಾಜ್ ಪಾದಯಾತ್ರಿ ಮುಂತಾದವರು ಹಾಜರಿದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button