*ಮೈತ್ರಿ ನಾಯಕರ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿ; ಸಂಸದೆ ಸುಮಲತಾ ವಿರುದ್ಧವೂ ಅಸಮಾಧಾನ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಈ ನಡುವೆ ಮೈತ್ರಿ ಪಕ್ಷದ ಕೆಲ ನಾಯಕರ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗರಂ ಆಗಿದ್ದಾರೆ.
ಅತ್ತ ಹಾಸನದಲ್ಲಿ ಮೈತ್ರಿ ಅಭ್ಯರ್ಥಿಗೆ ಬಿಜೆಪಿಯ ಪ್ರೀತಂ ಗೌಡ ಸಹಕಾರ ನೀಡುತ್ತಿಲ್ಲ, ಪ್ರಚಾರದಲ್ಲಿಯೂ ಭಾಗಿಯಾಗುತ್ತಿಲ್ಲ. ಇತ್ತ ಮಂಡ್ಯದಲ್ಲಿ ಸಂಸದೆ ಸುಮಲತಾ ಕೂಡ ಮಾಜಿ ಸಿಎಂ ಕುಮಾರಸ್ವಾಮಿ ಪರ ಚುನಾವಣಾ ಪ್ರಚಾರಕ್ಕೆ ಮುಂದಾಗಿಲ್ಲ. ಇದು ಸಹಜವಾಗಿಯೇ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತಿದೆ.
ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಪ್ರಧಾನಿ ದೇವೇಗೌಡ ಇದೇ ವಿಚಾರವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಕೆಲ ನಾಯಕರು ಹಾಸನದಲ್ಲಿ ಕೋ-ಆಪರೇಟ್ ಮಾಡ್ತಿಲ್ಲ. ಸುಮಲತಾ ಪ್ರಚಾರ ಮಾಡದಿದ್ದರೂ ಕುಮಾರಸ್ವಾಮಿಗೆ ಅಪಾಯವಿಲ್ಲ ಎಂದು ಹೇಳಿದ್ದಾರೆ.
ಹಾಸನದಲ್ಲಿ ಬಿಜೆಪಿಯ ಕೆಲವರು, ಮಂಡ್ಯದಲ್ಲಿ ಸುಮಲತಾ ಮೈತ್ರಿ ಅಭ್ಯರ್ಥಿಗೆ ಸಹಕಾರ ಕೊಡದಿದ್ದರೂ ಯಾವುದೇ ತೊಂದರೆ ಆಗಲ್ಲ. ಪ್ರಮುಖವಾಗಿ ಕಾವೇರಿ ಸಮಸ್ಯೆ ಇದೆ. ಅದು ಜೀವನ್ಮರಣದ ಪ್ರಶ್ನೆ. ಮಂಡ್ಯದಲ್ಲಿ ಕೈ ಅಭ್ಯರ್ಥಿ ಗೆಲ್ಲಲು 140 ಕೋಟಿ ಎನ್ ಓಸಿ ಬಿಡುಗಡೆ ಮಾಡಿದ್ದಾರೆ. ದೇಶದ ಸಂಪತ್ತನ್ನು ಹಂಚುತ್ತೇವೆ ಎಂದು ಕಾಂಗ್ರೆಸ್ ನವರು ಜಗಳ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶಕ್ತಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ