ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಾಳ್ಮೆ ಕಳೆದುಕೊಂಡಿದ್ದಾರೆ. ಕರ್ನಾಟಕ ಪ್ರದೇಶಗಳನ್ನು ಒಳಗೊಂಡು ಮಹಾರಾಷ್ಟ್ರದ ಹೊಸ ನಕ್ಷೆಯನ್ನು ತಯಾರು ಮಾಡಿದ್ದು, ತಪ್ಪು ನಿರ್ಧಾರ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.
ಮೊರಾರ್ಜಿ ದೇಸಾಯಿ ಗಡಿ ವಿವಾದ ಮುಗಿದ ಅಧ್ಯಾಯ ಎಂದು ಹೇಳಿದ್ದರು. ಮೊರಾರ್ಜಿ ದೇಸಾಯಿ ಹೇಳಿದ್ದ ಸಂದರ್ಭದಲ್ಲಿ ನಾನೂ ಇದ್ದೆ. ಈ ವಿಚಾರ ಈಗಾಗಲೇ ಮುಕ್ತಾಯವಾಗಿದೆ. ಈಗ ಚುನಾವಣೆಗಾಗಿ ಮತ್ತೆ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದರು.
ಇನ್ನು ಮಹದಾಯಿ ನದಿ ನೀರಿನ ವಿಚಾರವಾಗಿ ಗೋವಾ ಸಿಎಂ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ದೇವೇಗೌಡರು, ಜಲವಿವಾದ ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿದೆ. ಈ ವಿಚಾರದಲ್ಲಿ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ. ಪ್ರಮೋದ್ ಸಾವಂತ್ ಭಾವನಾತ್ಮಕ ವಿಚಾರವಾಗಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ