Karnataka NewsLatestPolitics

*ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ತೀವ್ರ ಏರುಪೇರು: ಆಸ್ಪತ್ರೆಗೆ ಧಾವಿಸಿದ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಹೆಚ್.​ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕಳೆದ ಮೂರು ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಚೆನ್ನಮ್ಮ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಮೊಮ್ಮಗ ನಿಖಿಲ್ ಹಾಗೂ ಮತ್ತು ಕುಟುಂಬ ಸದಸ್ಯರು ಮಣಿಪಾಲ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಮೂರು ದಿನಗಳಿಂದ ಚೆನ್ನಮ್ಮ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿರುವ ಹೆಚ್.ಡಿ.ಕುಮಾರಸ್ವಾಮಿ ವೈದ್ಯರೊಂದಿಗೆ ಮಾತನಾಡಿ, ತಾಯಿಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button