Kannada NewsKarnataka NewsLatestPolitics
*ಆಸ್ಪತ್ರೆಗೆ ತೆರಳಿ ಹೆಚ್.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ- ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ರಾಜಕೀಯ ನಾಯಕರು ಆಸ್ಪತ್ರೆಗೆ ತೆರಳಿ ದೇವೇಗೌಡ ಆರೋಗ್ಯ ವಿಚಾರಿಸಿದರು.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಚಿಕಿತ್ಸೆ ಪಡೆಯುತ್ತಿದ್ದು, ಇಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.