Belagavi NewsBelgaum NewsKarnataka News

*ಭಕ್ತ ಕನಕದಾಸ ಜಯಂತಿ; ಪೂರ್ವ ಸಿದ್ಧತಾ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರದ ನಿರ್ದೇಶನದಂತೆ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನವಂಬರ್ 18 ರಂದು ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಸಂಭ್ರಮದಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ನ.08) ನಡೆದ ಭಕ್ತ ಕನಕದಾಸ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಕೋಟೆ ಕೆರೆಯಿಂದ ಕುಮಾರ ಗಂಧರ್ವ ಕಲಾ ಮಂದಿರದವೆಗೆ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಅದೇ ರೀತಿಯಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯನ್ನು ನೇಮಿಸಲಾಗುವುದು ಎಂದು ತಿಳಿಸಿದರು.

ಸರ್ಕಾರಿ ಕಚೇರಿಗಳಲ್ಲಿ ಭಕ್ತ ಕನಕದಾಸರ ಭಾವಚಿತ್ರ ಪೂಜೆ ಸಲ್ಲಿಸಲು ನಿರ್ದೇಶನ ನೀಡಲಾಗುವುದು. ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲಿದ್ದು, ಮೆರವಣಿಗೆ ಸಂದರ್ಭದಲ್ಲಿ ಟ್ರಾಫಿಕ್ ಸಮಸ್ಯೆಯಾಗದಂತೆ ಸೂಕ್ತ ಪೊಲೀಸ್ ಬಂದಬಸ್ತ್ ಒದಗಿಸಲಾಗುವುದು. 

Home add -Advt

ಮಹಾನಗರ ಪಾಲಿಕೆ ವತಿಯಿಂದ ನಗರದ ಪ್ರಮುಖ ವೃತ್ತಗಳಲ್ಲಿ ಫಲಕಗಳ ಅಳವಡಿಕೆಗೆ ಹಾಗೂ ಜಯಂತಿ ಕಾರ್ಯಕ್ರಮದಲ್ಲಿ ಕುಡಿಯುವ ನೀರು ಪೂರೈಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸಮಾಜದ ಮುಖಂಡರಾದ ಅಶೋಕ ಸದಲಗೆ, ಯಲ್ಲಪ್ಪ ಕುಂಬಾರ, ಎಲ್.ಜೆ ಪೂಜಾರಿ, ಎಸ್.ಎಂ ಕಾಡಮ್ಮನವ, ರೇಖಾ ದಳವಾಯಿ, ಎಸ್. ವಾಯ್ ಮರಕುಂಬಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Related Articles

Back to top button