Latest

ಮತದಾನ ಪ್ರಕ್ರಿಯೆ ಮುಗಿಯುತ್ತಲೇ ಸಿಂಗಾಪುರಕ್ಕೆ ಹಾರಿದ ಎಚ್.ಡಿ. ಕುಮಾರಸ್ವಾಮಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರ ಮುಕ್ತಾಯಗೊಳ್ಳುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಿಂದ ಚುನಾವಣೆ ಕಣಕ್ಕಿಳಿದಿರುವ ಕುಮಾರಸ್ವಾಮಿ ಅವರ ಆರೋಗ್ಯ ಕೈಕೊಟ್ಟಿದ್ದು ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯಲಿರುವ ಅವರ ಅಲ್ಲಿ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಕಳೆದ ಮೂರು ತಿಂಗಳುಗಳಿಂದ ಚುನಾವಣೆ ಪ್ರಚಾರ ಕಾರ್ಯದಲ್ಲಿ ಎಡೆಬಿಡದೆ ನಿರತರಾಗಿದ್ದ ಕುಮಾರಸ್ವಾಮಿ ಅವರು ಅನಾರೋಗ್ಯದಿಂದಾಗಿ 20 ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು ಅಲ್ಲಿಂದಲೇ ಚುನಾವಣಾ ಕಾರ್ಯತಂತ್ರಳನ್ನು ಹೆಣೆಯುವಲ್ಲಿ ನಿರತರಾಗಿದ್ದರು.

ಬುಧವಾರ ರಾತ್ರಿ ಮತದಾನ ಪ್ರಕ್ರಿಯೆ ಅಂತ್ಯಗೊಳ್ಳುತ್ತಿದ್ದಂತೆ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾಗಿ ಮೂಲಗಳು ತಿಳಿಸಿವೆ.

Home add -Advt

https://pragati.taskdun.com/c-t-raviadmitedhospitalchikkamagalore/
https://pragati.taskdun.com/b-s-yedyurappareactionelection-result/

https://pragati.taskdun.com/dr-sonali-sarnobat-who-campaigned-continuously-for-bjp-did-not-defect-even-if-she-lost-the-ticket/

Related Articles

Back to top button