Politics

*ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ: ಸಿಎಂ ವಿರುದ್ಧ ಕುಮಾರಸ್ವಾಮಿ ಗರಂ*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧ ಮೆಟ್ಟಿಲು ಮೇಲೆ ಸರ್ಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ. ಇದರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಸಿದ್ದರಾಮಯ್ಯ ಅವರೇ, ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ? ದಯವಿಟ್ಟು ಹೇಳುವಿರಾ‌?

ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button