Latest

ಕೇಂದ್ರದ ಆಯುಷ್ಮಾನ್ ಭಾರತ್ ಯಾವ ಪುರುಷಾರ್ಥಕ್ಕೆ?; ಹೆಚ್ ಡಿಕೆ ಕಿಡಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲ ಎಂದಾದರೆ ಈ ಯೋಜನೆ ಇರುವುದು ಮತ್ತಿನ್ಯಾವ ಪುರುಷಾರ್ಥಕ್ಕೆ? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇಕಡ 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ. ಆಯುಷ್ಮಾನ್ ಭಾರತ ಯೋಜನೆ ಅಡಿ ಕೊರೊನಾ ಸೋಂಕಿತರು ಉಚಿತವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿರ್ಬಂಧಿಸಿರುವುದು ಖಂಡನೀಯ ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ 5 ಲಕ್ಷ ರೂಪಾಯಿ ವ್ಯಾಪ್ತಿಯಲ್ಲಿ ಚಿಕಿತ್ಸೆ ಪಡೆಯಲು ಎಡರು ತೊಡರುಗಳಿವೆ. ಮಹಾಮಾರಿ ಕೊರೊನಾ ದೇಶವನ್ನು ನಲುಗಿಸುತ್ತಿರುವ ಈ ದುರಿತ ಕಾಲದಲ್ಲಿ ಕೇಂದ್ರ ಸರ್ಕಾರ ಔದಾರ್ಯ ಪ್ರದರ್ಶಿಸಬೇಕು. ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯಲು ಇರುವ ನಿರ್ಬಂಧಗಳನ್ನು ಸಡಿಲಗೊಳಿಸಿ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.
ವ್ಯಾಕ್ಸಿನ್ ನೋ ಸ್ಟಾಕ್; ರಾಜ್ಯಾದ್ಯಂತ ಲಸಿಕೆಗಾಗಿ ಹಾಹಾಕಾರ

Related Articles

Back to top button