Kannada NewsKarnataka NewsLatest

*ಹರಿಪ್ರಸಾದ್ ಬಗ್ಗೆ ಹೊಸ ಬಾಂಬ್ ಸಿಡಿಸಿದ ಹೆಚ್.ಡಿ.ಕೆ*

ಪ್ರಗತಿವಾಹಿನಿ ಸುದ್ದಿ; ಹಾಸನ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ಮತ್ತೆ ಅಸಮಾಧಾನ ಹೊರಹಾಕಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ನಲ್ಲಿ ಹರಿಪ್ರಸಾದ್ ಒಬ್ಬರೇ ಅಲ್ಲ. ಇನ್ನೂ ಹಲವರು ಇದ್ದಾರೆ. ಒಂದೊಂದೇ ಧ್ವನಿ ಹೊರ ಬರಲಿದೆ ಎಂದು ಹೇಳಿದ್ದಾರೆ.

ನಾನು 50 ಜನರನ್ನು ಕರೆದುಕೊಂಡು ಬರುತ್ತೇನೆ ಎಂದು ಕೇಂದ್ರ ನಾಯಕರ ಬಳಿ ಹರಿಪ್ರಸಾದ್ ಮಾತನಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ಇಲ್ಲಿ ಯಾರೂ ನಿಷ್ಠರು, ಪ್ರಾಮಾಣಿಕರು ಇಲ್ಲ. ಅವರವರ ಅನುಕೂಲಕ್ಕೆ ತಕ್ಕಂತೆ ನಡೆದುಕೊಳ್ಳುತ್ತಾರೆ ಅಷ್ಟೇ. ಲೋಕಸಭಾ ಚುನಾವಣೆ ಬಳಿಕ ಗೊತ್ತಾಗಲಿದೆ ಈ ಸರ್ಕಾರ ಏನಾಗುತ್ತೆ ಎಂಬುದು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.


Related Articles

Back to top button