*ಮೋದಿ ಹೆಸರಿನಲ್ಲಿ ಹೊಟ್ಟೆಪಾಡು ನೋಡ್ಕೊಂಡಿರೋರು ನೀವು; ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು?;ಬಿ.ಎಲ್.ಸಂತೋಷ್ ವಿರುದ್ಧ HDK ಕೆಂಡಾಮಂಡಲ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅವನ್ಯಾರೋ ಜೋಳಿಗೆ ಇಡ್ಕೊಂಡು ಓಡಾಡೋನು ಏನೋ ಹೇಳಿದ್ದಾನೆ. ಕರ್ನಾಟಕಕ್ಕೂ ಆತನಿಗೂ ಏನು ಸಂಬಂಧ, ಕರ್ನಾಟಕಕ್ಕೆ ನಿನ್ನ ಕೊಡುಗೆ ಏನು? ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರುನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಬಿ.ಎಲ್.ಸಂತೋಷ್ ಮಾಜಿ ಪ್ರಧಾನಿ ದೇವೇಗೌಡರನ್ನು, ಜೆಡಿಎಸ್ ನ್ನು ಟಿಕಿಸಿದ್ದಾರೆ. ನಮ್ಮ ಪಕ್ಷದ ಬಗ್ಗೆ ಬಹಳ ಲಘುವಾಗಿ ಮಾತನಾಡಿದ್ದಾರೆ. ನಮ್ಮ ಪಕ್ಷದ ಬಗ್ಗೆ, ಮನೆತನದ ಬಗ್ಗೆ ಲಘುವಾಗಿ ಮಾತನಾಡಬೇಡಿ. ಮೋದಿ ಹೆಸರಿನಲ್ಲಿ ಹೊಟ್ಟೆಪಾಡು ನೋಡ್ಕೊಂಡಿರೋರು ನೀವು. 2023ಕ್ಕೆ ನಿಮ್ಮ ಪರಿಸ್ಥಿತಿ ಏನಾಗಿರುತ್ತದೆ ಎನ್ನುವುದನ್ನು ಒಮ್ಮೆ ಊಹೆ ಮಾಡಿಕೊಳ್ಳಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ದಂಧೆ ಮಾಡುವವರು, ವಾಮಾಚಾರ ಮಾಡುವವರಿಂದ ಹಣ ತೆಗೆದುಕೊಂಡು ಆಪರೇಶನ್ ಕಮಲ ಮಾಡಿ ನಮ್ಮ ಸರ್ಕಾರ ಉರುಳಿಸಿದರಿ. 40% ಸರ್ಕಾರ ನಿಮ್ಮದು. ಲೂಟಿ ದರೋಡೆ ಮಾಡಿ ಕರ್ನಾಟಕ ಹಣವನ್ನ ಕೊಂಡೊಯ್ದಿದ್ದೀರಾ. ನಮ್ಮ ಬಗ್ಗೆ ಮಾತಾಡಲು ನೈತಿಕತೆ ನಿಮಗೆ ಇಲ್ಲ. ನಾನು ಸರಕಾರ ಮಾಡೋಣ ಎಂದು ನಿಮ್ಮ ಮನೆ ಬಾಗಿಲಿಗೆ ಬಂದಿರಲಿಲ್ಲ. ಯಾರು ಯಾರ ಮನೆ ಬಾಗಿಲಿಗೆ ಬಂದಿದ್ದರು ಎನ್ನುವುದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತು. ನಮ್ಮ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ದರೋಡೆಕೋರರು, ಲೂಟಿಕೋರರು ಇಂಥ ಬಿಜೆಪಿಯವರ ಜತೆ ಸೇರಿ ನಾನು ಸರ್ಕಾರ ನಡೆಸುವುದಕ್ಕೆ ಆಗುತ್ತಾ? ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲು ಆಗುತ್ತಾ? ಜನರ ಮಧ್ಯೆ ಧ್ವೇಷದ ಭಾವನೆ ಬಿತ್ತುವವರ ಜೊತೆ ಸರ್ಕಾರ ರಚೆನೆ ಹೇಗೆ ಸಾಧ್ಯ? 2023ರ ಚುನಾವಣೆ ನಂತರ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆ. ಆಗ ಬಿಜೆಪಿಯವರು ನಮ್ಮ ಮುಂದೆ ಅರ್ಜಿ ಹಿಡಿದು ಬರುತ್ತಾರೆ. ಚುನಾವಣೆ ಬಳಿಕ ಮಾತನಾಡೋಣ ಎಂದು ಹೇಳಿದರು.
*BREAKING NEWS: ವಿಧಾನಸಭಾ ಚುನಾವಣೆ; JDS ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ*
https://pragati.taskdun.com/vidhanasabha-election-2023jdscandidate-1st-listh-d-kumaraswamy/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ