LatestUncategorized

*ಪೇಶ್ವೆ ವಂಶಸ್ಥರು ಬಿಎಸ್ ವೈಗೆ ಅಧಿಕಾರ ನಡೆಸಲು ಬಿಡಲಿಲ್ಲ; ಮತ್ತೆ ಕಿಡಿಕಾರಿದ ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ; ಕಾರವಾರ: ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಜೆಡಿಎಸ್ ಕುಟುಂಬ ರಾಜಕಾರಣದ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಕುಟುಂಬ ರಾಜಕಾರಣ ಬಿಜೆಪಿ, ಕಾಂಗ್ರೆಸ್ ನಲ್ಲಿ ಇಲ್ಲವೇ? ನಮ್ಮ ಮೇಲೆ ಜನರ ಪ್ರೀತಿ ವಿಶ್ವಾಸವನ್ನು ಕಂಡು ರಾಜಕೀಯವಾಗಿ ಇವರು ನಮ್ಮ ಕುಟುಂಬವನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ, ನಾನು ಹೇಳಿದ ಪೇಶ್ವೆ ವಂಶದವರೇ ಯಡಿಯೂರಪ್ಪನವರಿಗೆ ಆಡಳಿತ ನಡೆಸಲು ಬಿಡಲಿಲ್ಲ ಎಂದು ಆರೋಪಿಸಿದ್ದಾರೆ.

ಯಡಿಯೂರಪ್ಪನವರು ಎರಡನೇ ಬಾರಿ ಕಷ್ಟ ಪಟ್ಟು ಮುಖ್ಯಮಂತ್ರಿಯಾದರು. ಆದರೆ ಅವರನ್ನು ಹೇಗೆ ನಡೆಸಿಕೊಂಡರು ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಪೇಶ್ವೆ ವಂಶದವರು ಯಡಿಯೂರಪ್ಪನವರ ಸರ್ಕಾರವನ್ನು ತೆಗೆದರು. ಯಡಿಯೂರಪ್ಪನವರಿಗೆ ಪೇಶ್ವೆ ವಂಶದವರು ಅಧಿಕಾರ ಕೊಡಲು ಬಿಡಲಿಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.

ಇನ್ನು ಪೇಶ್ವೆಗಳ ವಂಶಾವಳಿಗೆ ಸಂಬಂಧಿಸಿದ ವ್ಯಕ್ತಿಯನ್ನು ಬಿಜೆಪಿ ಮುಂದಿನ ಸಿಎಂ ಮಾಡಲು ಹುನ್ನಾರ ನಡೆಸಿದೆ. ಈ ಬಗ್ಗೆ ಜನರಿಗೆ ಎಚ್ಚೆತ್ತುಕೊಳ್ಳುವಂತೆ ಹೇಳಿದ್ದೇನೆ ನನ್ನ ಹೇಳಿಕೆಯಲ್ಲಿ ಗೊಂದಲವಿಲ್ಲ, ಈ ಕುರಿತು ಟ್ವೀಟ್ ಮೂಲಕ ಸ್ಪಷ್ಟ ಪಡಿಸುತ್ತೇನೆ ಎಂದು ಹೇಳಿದರು.

Home add -Advt

 

*ನಾನು ಕೈ ಜೋಡಿಸದಿದ್ದರೆ BSY ರಾಜಕೀಯವೇ ಅಂತ್ಯವಾಗ್ತಿತ್ತು; ವಿಜಯೇಂದ್ರಗೆ ತಿರುಗೇಟು ನೀಡಿದ ಹೆಚ್.ಡಿಕುಮಾರಸ್ವಾಮಿ*

https://pragati.taskdun.com/h-d-kumaraswamyb-s-yedyurappab-y-vijayendrareaction/

Related Articles

Back to top button