Latest

ಗಂಡಸ್ತನದ ಮಾತನಾಡಿದ್ದ ಹೆಚ್.ಡಿ.ಕೆಗೆ BJP ತಿರುಗೇಟು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಹಾಗೂ ಹಿಂದೂ ಪರ ಸಂಘಟನೆ, ಬಜರಂಗದಳದ ಕಾರ್ಯಕರ್ತರ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಬಿಜೆಪಿ ಘಟಕ ಕಟುಶಬ್ಧಗಳಿಂದ ಟೀಕಿಸಿದೆ.

ಹೆಚ್.ಡಿ.ಕೆ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಬಾಯಿಗೆ ಬಂದಂತೆ ಮಾತನಾಡುವುದು ಆ ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ರಾಜಕೀಯ ವರಸೆ. ಯಾವ ವಿಚಾರದಲ್ಲಿ ತನ್ನ ಮತಬ್ಯಾಂಕ್‌ ಗಟ್ಟಿಯಾಗುತ್ತದೋ ಆ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಇವರ ಜಾಯಮಾನ. ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತನಾಡುವುದರಲ್ಲಿ “ಪುರುಷಾರ್ಥ” ಅಡಗಿದೆಯೇ? ಎಂದು ಪ್ರೆಶ್ನಿಸಿದೆ.

ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ. ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ ಎಂದು ಹೇಳಿದೆ.

ಲಕ್ಕಿ ಡಿಪ್ ಸಿಎಂ ಕುಮಾರಸ್ವಾಮಿ ಅವರೇ, ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ. ನಿಮ್ಮ ಜಾತ್ಯತೀತ ನಡೆ ಎಂಬುದು ಅವಕಾಶವಾದದ ಪರಿಷ್ಕೃತ ರೂಪ. ಅಧಿಕಾರ ಅನುಭವಿಸಲು ಏನೂ ಬೇಕಾದರೂ ಮಾಡಲು ಸಿದ್ದವಾಗಿರುವವರು ನೀವು. ನಿಮ್ಮಿಂದ ಯಾವ ವ್ಯಕ್ತಿಯೂ, ಯಾವ ಸಂಘಟನೆಯೂ ಪಾಠ ಕಲಿಯಬೇಕಾಗಿಲ್ಲ ಎಂದು ಕಿಡಿಕಾರಿದೆ.

ಉಪಸಭಾಪತಿಯ ಕುರ್ಚಿಗೆ ಗಂಟುಬಿದ್ದು ಸಿಗದಿದ್ದಾಗ ಕಾಂಗ್ರೆಸ್‌ ತ್ಯಜಿಸಿ ಜೆಡಿಎಸ್‌ ಸೇರಿರುವ ವ್ಯಕ್ತಿಯ ಸಮುದಾಯವನ್ನು ಮೆಚ್ಚಿಸಲು ಎಚ್‌ಡಿಕೆ ಸರ್ಕಸ್‌ ಮಾಡುತ್ತಿದ್ದಾರೆ. ಇಂತಹ ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ. ಕುಮಾರ ಸ್ವಾಮಿಯ ರಾಜಕೀಯ ಜೀವನವೇ ಒಂದು ಡ್ರಾಮಾ. ಇವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ ಎಂದು ಗುಡುಗಿದೆ.

ಪೊಲೀಸ್ ಕಲ್ಯಾಣ ನಿಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 5 ಕೋಟಿ ರೂ. ಘೋಷಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button