Uncategorized

*ಸಚಿವ ಚೆಲುವರಾಯಸ್ವಾಮಿ ರಾಜೀನಾಮೆಗೆ ಮಾಜಿ ಸಿಎಂ HDK ಒತ್ತಾಯ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಅಹಂಕಾರಿ ಸಚಿವರನ್ನು ಸಂಪುಟದಿಂದ ಹೊರ ಹಾಕಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಮೈಸೂರು ಆಸ್ಪತ್ರೆಗೆ ಭೇಟಿ ನೀಡಿ ಆತ್ಮಹತ್ಯೆಗೆ ಯತ್ನಿಸಿದ ಸಾರಿಗೆ ನೌಕರನನ್ನ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ, ಕುಟುಂಬದ ಸದಸ್ಯರಿಗೆ ದೈರ್ಯ ತುಂಬಿದರು.

ಈ ವೇಲೆ ಮಾತನಾಡಿದ ಕುಮಾರಸ್ವಾಮಿ, ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್, ವರ್ಗಾವಣೆ ಮಾಡಿದ್ದಕ್ಕೆ ನೊಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ವಿಷ ಸೇವಿಸಿದ್ದಾರೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಈ ಬಗ್ಗೆ ಕ್ರಮ ಕೈಗೊಳ್ಳಲಿ. ತಮ್ಮ ರಾಜಕೀಯ ತೆವಲಿಗೆ ಅಮಾಯಕರ ಮೇಲೆ ದೌಜನ್ಯ ಮಾಡುತ್ತಿದ್ದಾರೆ. ಸಚಿವ ಚಲುವರಾಯಸ್ವಾಮಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button