Politics

*ಮತ್ತೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ: HDK ಆತ್ಮವಿಶ್ವಾಸ*

ಪ್ರಗತಿವಾಹಿನಿ ಸುದ್ದಿ: ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಹೆಳುವ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ 3ನೇ ಬಾರಿ ಸಿಎಂ ಆಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, 2028ರವರೆಗೆ ಈ ಸರ್ಕಾರ ನಡೆಯಲ್ಲ. ಜನರೇ ಸರ್ಕಾರವನ್ನು ತೆಗೆಯುತ್ತಾರೆ. ಈಗಿನ ಪರಿಸ್ಥಿತಿ ನೋಡಿದರೆ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ಭವಿಷ್ಯ ನುಡಿದರು.

ಈ ಸರ್ಕಾರವನ್ನು 2028ರವರೆಗೆ ಎಳೆಯಲಾಗದು. ಮತ್ತೆ ನಾನೇ ರಾಜ್ಯದ ಸಿಎಂ ಆಗಲಿದ್ದೇನೆ. ಜನರು ಬಯಸಿದರೆ ಮತ್ತೆ ಯಾಕೆ ನಾನೇ ಸಿಎಂ ಆಗಬಾರದು? ಜನರು ಮತ್ತೆ ತೀರ್ಮಾನ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button