
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರಾಜಕಾರಣಿಗಳು ಸೋಂಕಿಗೆ ಒಅಳಗಾಗುತ್ತಿದ್ದಾರೆ. ಇದೀಗ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಸ್ವತ: ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.
ಕುಮಾರಸ್ವಾಮಿಯವರು ಕಳೆದ 10 ದಿನಗಳಿಂದ ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಉಪಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೂ ನಿನ್ನೆ ಕೋವಿಡ್ ಪಾಸಿಟಿವ್ ಬಂದಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಅಲ್ಲದೇ ಇತ್ತೀಚೆಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದಿತ್ತಲ್ಲದೇ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಇದೀಗ ಅವರ ಪುತ್ರ ಕುಮಾರಸ್ವಾಮಿಗೂ ಸೋಂಕು ತಗುಲಿದ್ದು, ಬೆಂಗಳೂರಿನ ಜೆ.ಪಿ.ನಗರದ ಮನೆಯಲ್ಲಿ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಹೃದಯಾಘಾತಕ್ಕೀಡಾಗಿದ್ದ ಖ್ಯಾತ ಹಾಸ್ಯ ನಟ ಇನ್ನಿಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ