Karnataka NewsLatestPolitics

*ಸಚಿವಾಕಾಂಕ್ಷಿಗಳಿಂದ ಸಿಎಂ ಡಿ.ಕೆ.ಶಿವಕುಮಾರ್ ವಸೂಲಿ ಮಾಡುತ್ತಿದ್ದಾರೆ: ಹೆಚ್.ಡಿ.ಕುಮರಸ್ವಾಮಿ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಸಂಪುಟ ಸೇರ್ಪಡೆ ವಿಷಯದಲ್ಲಿ ಮ್ಯಾನೇಜ್ ಮೆಂಟ್ ಕೋಟಾ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಮಂತ್ರಿಯಾಗಲು ಮ್ಯಾನೇಜ್‌ಮೆಂಟ್ ಇಲ್ಲವೇ ಪೇಮೆಂಟ್ ಕೋಟಾದಲ್ಲಿ ಸಚಿವರಾಗಲು ದೊಡ್ಡ ಪ್ರಮಾಣದಲ್ಲಿ ಲಾಬಿ ನಡೆಯುತ್ತಿದೆ ಎಂದು ಆರೋಪಿಸಿದರು.

ಸಂಪುಟ ಆಕಾಂಕ್ಷಿಗಳಿಂದ ಸಿಎಂ ಡಿ.ಕೆ.ಶಿವಕುಮಾರ್ ವಸೂಲಿ ಮಾಡುತ್ತಿದ್ದಾರೆ. ಹೈಕಮಾಂಡ್ ಗೆ ಕೊಡಬೇಕು ಎಂದು ಶಾಸಕರಿಂದ ಹಣ ಪೀಕುತ್ತಿರುವ ಮಾಹಿತಿ ಇದೆ. ಮ್ಯಾನೆಜ್‌ಮೆಂಟ್ ಕೋಟಾಕ್ಕೆ ಶೇಕಡ 5%, ಪೇಮೆಂಟ್ ಕೋಟಾಕ್ಕೆ 95% ಸೀಟುಗಳನ್ನು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.

ಇಂತಹ. ಪೇಮೆಂಟ್ ಸೀಟುಗಳನ್ನು ಪಡೆಯಲು ಯಾರು ಅರ್ಹರಿರುತ್ತಾರೋ ಅಂತಹವರು ಮಾತ್ರ ಮಂತ್ರಿಯಾಗಲು ಸಾಧ್ಯ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು. ಇದಕ್ಕಾಗಿಯೇ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ ಎಂದು ಹೇಳಿದರು.

ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯುವುದಕ್ಕೆ ಸರ್ಕಾರಿ ಮತ್ತು ಮ್ಯಾನೇಜ್ ಮೆಂಟ್ ಕೋಟಾ ಎಂದು ಇರುತ್ತದೆ. ಆ ಬಗ್ಗೆ ನಾನು ಕೇಳಿದ್ದೇನೆ. ಆದರೆ ಕರ್ನಾಟಕದಲ್ಲಿ ಸಂಪುಟ ಸೇರ್ಪಡೆಗೆ ಹೈಕಮಾಂಡ್ ಕೋಟಾ, ಮ್ಯಾನೇಜ್ಮೆಂಟ್ ಕೋಟಾ ಎಂದು ಶುರುವಾಗಿದೆ. ಮಂತ್ರಿ ಆಗಬೇಕಾದರೆ ಕಾಸು ಕೊಡಬೇಕು. ಎಗ್ಗಿಲ್ಲದೆ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button