Kannada NewsKarnataka NewsLatest

*ಲಘು ಸ್ಟ್ರೋಕ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ; ಡಿಸ್ಚಾರ್ಜ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಘು ಸ್ಟ್ರೋಕ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ತೀವ್ರ ಜ್ವರ, ಲಘು ಸ್ಟ್ರೋಕ್ ನಿಂದ ಆಗಸ್ಟ್ 30ರಂದು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡಲಾಗಿದ್ದು, ಇದೀಗ ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಭಗವಂತ ಹಾಗೂ ತಂದೆ-ತಾಯಿ ಆಶಿರ್ವಾದದಿಂದ ನಾನು ಗುಣಮುಖನಾಗಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ವೇಳೆ ಮಾತನಾಡಿದ ಅಪೊಲೋ ಆಸ್ಪತ್ರೆ ವೈದ್ಯರು. ಕುಮಾರಸ್ವಾಮಿ ಗುಣಮುಖರಾಗಿದ್ದಾರೆ. ಲಘು ಸ್ಟ್ರೋಕ್ ಆದಗ ಅವರು ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದರಿಂದ ಯಾವುದೇ ಸಮಸ್ಯೆಯಾಗಿಲ್ಲ. ಯಾರಿಗೆ ಲಘು ಸ್ಟ್ರೋಕ್ ನಂತಹ ಗುಣಲಕ್ಷಣ ಕಂಡುಬಂದಲ್ಲಿ ನಿರ್ಲಕ್ಷ ಮಾಡದೇ ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಿರಿ. ಗೋಲ್ಡನ್ ಅವರ್ ಒಳಗೆ ಸೂಕ್ತ ಚಿಕಿತ್ಸೆ ಸಿಕ್ಕರೆ ರೋಗಿಯನ್ನು ರಕ್ಷಿಸಬಹುದು ಎಂದು ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button