Election NewsLatestPolitics

*ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಕಾವು ಏರುತ್ತಿದೆ. ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ. ಈ ನಡುವೆ ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ತುಮಕೂರಿನ ಗುಬ್ಬಿಯಲ್ಲಿ ಏಪ್ರಿಲ್ 13ರಂದು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದ ಹೆಚ್.ಡಿ.ಕುಮಾರಸ್ವಾಮಿ, ವೈಯಕ್ತಿಕವಾಗಿ ನಿಂದಿಸಿದ್ದರು. ಕೊತ್ವಾಲ್ ಗರಡಿಯಿಂದ ಬಂದವರು. ಹಣ ದಾಹಕ್ಕೆ ಏನು ಬೇಕಾದ್ರೂ ಮಾಡ್ತಾರೆ ಎಂದು ಟೀಕಿಸಿದ್ದರು.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಗುಬ್ಬಿ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button