LatestUncategorized

*ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತೀವ್ರ ಅನಾರೋಗ್ಯವುಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿರಂತರವಾಗಿ ಸಾರ್ವಜನಿಕ ಸಭೆ, ಪಂಚರತ್ನ ರಥಯಾತ್ರೆ ಸೇರಿದಂತೆ ಪ್ರಚಾರ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತಿದ್ದ ಕಾರಣ ತೀವ್ರ ಆಯಾಸದಿಂದಾಗಿ ಕುಮಾರಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ವಿಶ್ರಾಂತಿ ಬಳಿಕ ಚುನಾವಣಾ ಪ್ರಚಾರ ಕಾರ್ಯ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಜೆಡಿಎಸ್ ಮುಖಂಡರು, ಕಾರ್ಯಕರ್ತರು ಯಾರೂ ಕೂಡ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಶೀಘ್ರ ಗುಣಮುಖನಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ವಿಶ್ರಾಂತಿಯಿಲ್ಲದೇ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರಿಂದ ತೀವ್ರ ಜ್ವರ ಕಾಣಿಸಿಕೊಂಡಿದೆ. ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೇ ಸಣ್ಣ ಪ್ರಮಾಣದಲ್ಲಿ ಲಂಗ್ಸ್ ಇನ್ಫೆಕ್ಷನ್ ಹಾಗೂ ಡಸ್ಟ್ ಅಲರ್ಜಿ ಕೂಡ ಇದೆ. ಹಾಗಾಗಿ ಆಸ್ಪತ್ರೆಗೆ ದಾಖಲಾಗಿದ್ದು ಸ್ಪೆಷಲ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

https://pragati.taskdun.com/karnatakarain-updateimd-6/

Related Articles

Back to top button