Politics

*ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಜನತಾದರ್ಶನ ಹಮ್ಮಿಕೊಂಡ ಕುಮಾರಸ್ವಾಮಿ* 

ಪ್ರಗತವಾಹಿನಿ ಸುದ್ದಿ: ಕೇಂದ್ರ ಸಚಿವರಾದ ಬಳಿಕ ಇದೆ ಮೊದಲ ಬಾರಿಗೆ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಜನತಾದರ್ಶನ ಕಾರ್ಯಕ್ರಮ ನಡೆಸುತ್ತಿದ್ದು, ಹಲವಾರು ಸಮಸ್ಯೆಗಳಿಗೆ ಸ್ಪಂದನೆ ನೀಡಿದ್ದಾರೆ.‌

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಇಂದು ಮಂಡ್ಯ ನಗರದ ಡಾ.ಬಿ.ಆರ್. ಅಂಬೇಡ್ಕ‌ರ್ ಭವನದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ಬಳಿಕ ಜನತಾದರ್ಶನದಲ್ಲಿ ಪಾಲ್ಗೊಂಡರು. 

ಮಂಡ್ಯದ ಸಂಜಯ್‌ ಸರ್ಕಲ್‌ ನಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಎಚ್‌ಡಿಕೆ ಸರ್ಕಾರದಿಂದ ನೆರವು ಕೊಡಿಸುವ ಭರವಸೆ ನೀಡಿದರು.

Home add -Advt

ಸಾರ್ವಜನಿಕರಲ್ಲಿ ಜನತಾದರ್ಶನದ ಮೇಲೆ ಸಾಕಷ್ಟು ನಿರೀಕ್ಷೆ ಇದ್ದು, ಪ್ರಸ್ತುತ ಸಾರ್ವಜನಿಕರ ಕುಂದು ಕೊರತೆ ಎಚ್‌ಡಿಕೆ ಆಲಿಸುತ್ತಿದ್ದು, ಸಂಜೆಯವರೆಗೂ ಜನಸಾಮಾನ್ಯರ ಜತೆ ಇದ್ದು ಜನರ ಸಮಸ್ಯೆಗೆ ಪರಿಹಾರ ಸೂಚಿಸಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button