ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್; ಬಿಹಾರ ಸಿಎಂ ನಿತೀಶ್ ಕುಮಾರ್ ಭೇಟಿ ಬಳಿಕ ಇದೀಗ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ರಾಷ್ಟ್ರ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಹೈದರಾಬಾದ್ ನಲ್ಲಿ ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ಇಂದು ಬೆಳಿಗ್ಗೆ ತೆಲಂಗಾಣ ಸಚಿವ, ಕೆಸಿಆರ್ ಪುತ್ರರೂ ಆಗಿರುವ ಕೆ.ಟಿ.ರಾಮರಾವ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಬಳಿಕ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರನ್ನು ಭೇಟಿಯಾಗಿ ರಾಜಕೀಯ ಸಮಾಲೋಚನೆ ನಡೆಸಿದ್ದಾರೆ.
ಉಭಯ ನಾಯಕರು ರಾಷ್ಟ್ರ ರಾಜಕೀಯದಲ್ಲಿ ಪ್ರಾದೇಶಿಕ ಪಕ್ಷಗಳ ಪಾತ್ರ ಮತ್ತು ಪ್ರಸ್ತುತ ಪರಿಸ್ಥಿತಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಕೆಸಿಆರ್ ವಹಿಸಬೇಕಿರುವ ಪ್ರಮುಖ ಪಾತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮೇ 26ರಂದು ತೆಲಂಗಾಣ ಸಿಎಂ ಕೆಸಿಆರ್ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರಿಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದರು. ಇದೀಗ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಕೆಸಿಆರ್ ಭೇಟಿಯಾಗಿರುವುದು ಮಹತ್ವ ಪಡೆದುಕೊಂಡಿದೆ.
ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಇನ್ನಿಲ್ಲ
https://pragati.taskdun.com/latest/dwarakapeethashankaracharya-swaroopananda-swamijipasses-away/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ