Kannada NewsKarnataka NewsLatestPolitics

*ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾದ ಈಶ್ವರಪ್ಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಬೆಂಗಳೂನ ಹೆಚ್.ಡಿ.ಕುಮರಸ್ವಾಮಿ ನಿವಾಸಕ್ಕೆ ಆಗಮಿಸಿದ ಕೆ.ಎಸ್.ಈಶ್ವರಪ್ಪ, ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಇಬ್ಬರೂ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಜೆಡಿಎಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಜತೆಯಲ್ಲಿ ಇದ್ದರು.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button