ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಎರಡೂ ರಾಜ್ಯಗಳ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಇದೆಲ್ಲವೂ ಚುನಾವಣೆಗಾಗಿ ನಡೆಯುತ್ತಿರುವ ರಾಜಕೀಯ ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬೀಚಗಾನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಮುಂದಿನ ಚುನಾವಣೆಗೆ ಮಹಾರಾಷ್ಟ್ರದವರಿಗೆ ಗಡಿ ಕ್ಯಾತೆ ಬೇಕಾಗಿದೆ. ರಾಜ್ಯದ ಬಿಜೆಪಿಯವರಿಗೆ ಚುನಾವಣೆಯಲ್ಲಿ ಜನರ ಬಳಿ ಹೋಗಲು ವಿಷಯವಿಲ್ಲದಾಗಿದೆ. ಹಾಗಾಗಿ ಗಡಿ ತಗಾದೆ ತೆಗೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಜನರ ನೆಮ್ಮದಿ ಕೆಡಿಸಿ ಧರ್ಮದ ವಿಚಾರ ಇಟ್ಕೊಂಡು ರಾಜಕೀಯ ಮಾಡಿದರು. ಈಗ ಗಡಿ ವಿವಾದ ಆರಂಭಿಸಿದ್ದಾರೆ. ಎರಡೂ ರಾಜ್ಯಗಳಲ್ಲೂ ಬಿಜೆಪಿ ಸರ್ಕಾರವೇ ಇದೆ. ಅಲ್ಲಿ ಈ ಬಗ್ಗೆ ಮಾತನಾಡಲಿ ಅದನ್ನು ಬಿಟ್ಟು ಸರ್ವಪಕ್ಷಗಳ ಸಭೆ ನಾಟಕವಾಡುತ್ತಿದ್ದಾರೆ.
ಸರ್ವಪಕ್ಷ ಸಭೆ ಕರೆದು ಏನು ಮಾಡುತ್ತೀರಿ? ಗೋಡಂಬಿ, ಬಾದಾಮಿ ಕೊಟ್ಟು ಕಳುಹಿಸಲು ಸರ್ವಪಕ್ಷ ಸಭೆ ಯಾಕೆ? ಇಷ್ಟಕ್ಕೂ ಬೆಳಗಾವಿ ಮಹಾರಾಷ್ಟ್ರದಲ್ಲಿದ್ದರೇನು? ಕರ್ನಾಟಕದಲ್ಲಿದ್ದರೇನು? ನಾವೆಲ್ಲರೂ ಭಾರತೀಯರು ಎನ್ನುತ್ತೀರಲ್ಲವೇ? ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಹೊರಟಿದ್ದೀರಲ್ಲ…ಇದನ್ನು ಹೇಳಿ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್; ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವರ ಸೂಚನೆ
https://pragati.taskdun.com/belagavikarnataka-maharashra-border-issuehigh-alerthome-minister-araga-jnanendra/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ