Latest

*ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ದ್ವನಿಗೂಡಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಬಿಜೆಪಿಯವರು ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮೇಲೆ ಐಟಿ, ಲೋಕಾಯುಕ್ತ ದಾಳಿ ಮೂಲಕ ಹೆದರಿಸುವ ಕೆಲಸ ಮಾಡುತ್ತಿದೆ ಎಂಬ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಧ್ವನಿಗೂಡಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್, ಜೆಡಿಎಸ್ ನ 50 ಅಭ್ಯರ್ಥಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಯುವ ಸುಳಿವು ಸಿಕ್ಕಿದೆ. ಬಿಜೆಪಿ ಐಟಿ, ಇಡಿ. ಕೋಲಾಯುಕ್ತ ಮೂಲಕ ವಿಪಕ್ಷದವರನ್ನು ಹೆದರಿಸುತ್ತಿದೆ ಎಂದು ಆರೋಪಿಸಿದ್ದರು.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಮಂಡ್ಯದಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿರುವುದರಲ್ಲಿ ತಪ್ಪಿಲ್ಲ. ಬಿಜೆಪಿಯಲ್ಲಿ ಐಟಿ ಮೋರ್ಚಾ, ಇಡಿ ಮೋರ್ಚಾ ಇದೆ. ಕಾಂಗ್ರೆಸ್, ಜೆಡಿಎಸ್ ಮುಖಂಡರ ಮೇಲೆ ದಾಳಿ ನಡೆಸಿ ಬೆದರಿಸುತ್ತಿದ್ದಾರೆ ಎಂದು ಹೇಳಿದರು.

https://pragati.taskdun.com/lkshmi-hebbalkarpressmeetbelagavi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button