Kannada NewsKarnataka NewsLatestPolitics

*ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಸ್ತಿ ವಿವರ ಮರೆಮಾಚಿದ ಆರೋಪದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಚುನಾವಣೆ ಸಂದರ್ಭದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಸ್ತಿ ಕುರಿತು ಪೂರ್ಣ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರ ಸಿ.ಎಸ್.ಸಿದ್ದರಾಜು ಎಂಬುವವರು ಮಾಜಿ ಸಿಎಂ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.

ಕುಮಾರಸ್ವಾಮಿಯವರು 2004ರ ವಿಧಾನಸಭಾ ಚುನಾವಣೆ ವೇಳೆ ಕೇತಗಾನಹಳ್ಳಿಯಲ್ಲಿ 24 ಎಕರೆ ಜಮೀನು ಇರುವ ಬಗ್ಗೆ ಉಲ್ಲೇಖಿಸಿದ್ದರು. ಚಿಕ್ಕಮ್ಮ ಸಾವಿತ್ರಮ್ಮ ಅವರಿಂದ ಕುಮಾರಸ್ವಾಮಿ ಜಮೀನು ದಾನ ಪಡೆದಿದ್ದಾಗಿ ಮಾಹಿತಿ ನೀಡಿದ್ದರು. ಸಾವಿತ್ರಮ್ಮನವರಿಗೆ ಕುಮಾರಸ್ವಾಮಿ ಬೇನಾಮಿಯಾಗಿದ್ದಾರಾ? ಅಥವಾ ತಾಯಿಯ ಸಹೋದರಿಯ ಆದಾಯದ ಮೂಲ ಯಾವುದು? ಈ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.


Home add -Advt

Related Articles

Back to top button