Latest

ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೇಕೆದಾಟು ಯೋಜನೆಗೆ ಒಕ್ಕೂಟ‌ ವ್ಯವಸ್ಥೆಯ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅನುಮತಿ ನೀಡುವ ಹೊಣೆಗಾರಿಕೆಯಿಂದ ಕೇಂದ್ರ ಸರಕಾರ ನುಣುಚಿಕೊಳ್ಳುತ್ತಿದೆʼಎಂದು ಮಾಜಿ ಸಿಎಂ ಹೆಚ್.ಡಿಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮೇಕೆದಾಟು ವಿಚಾರವಾಗಿ ಎರಡೂ ರಾಜ್ಯಗಳು ಕುಳಿತು ಚರ್ಚೆ ಮಾಡಿಕೊಂಡು ಒಮ್ಮತಕ್ಕೆ ಬರಬೇಕು ಎಂದು ಕೇಂದ್ರ ಸಚಿವರೇ ಹೇಳುತ್ತಿರುವುದು, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಯತ್ನವಾಗಿದೆ ಎಂದು ಸರಣಿ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ಮುಂಗಡ ಪತ್ರದಲ್ಲಿ ಯೋಜನೆಗೆ 1,000 ಕೋಟಿ ರೂ. ಕೊಟ್ಟೆವು ಎಂದು ಬಿಜೆಪಿ ಹಾಗೂ ನಮ್ಮ ಪಾದಯಾತ್ರೆಯಿಂದಲೇ ಹಣ ಘೋಷಿಸಲಾಯಿತು ಎಂದು ಕಾಂಗ್ರೆಸ್‌ ಕುಣಿಯುತ್ತಿವೆ. ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು, ಈಗ ಮೇಕೆದಾಟು ಇಟ್ಟುಕೊಟ್ಟುಕೊಂಡು ʼಚುನಾವಣಾ ಆಟʼ ಶುರು ಮಾಡಿವೆ.

ವಾಸ್ತವ ಏನು ಎಂಬುದನ್ನು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೇಂದ್ರದ ಕಾನೂನು ಸುಳಿಯಲ್ಲಿ ಸಿಕ್ಕಿರುವ ಹಾಗೂ ಕೇಂದ್ರದ ಜಲ ಆಯೋಗ (CWC)ದಲ್ಲಿ ಕೊಳೆಯುತ್ತಿರುವ ಮೇಕೆದಾಟು ಯೋಜನೆಯು ಪಾದಯಾತ್ರೆಯಿಂದ ಬರುವುದಿಲ್ಲ. ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿಯೇ ತಂದುಕೊಳ್ಳಬೇಕು ಎಂದಿದ್ದೆ.

ಈಗ ಕೇಂದ್ರ ಸಚಿವರಾದ ಶೇಖಾವತ್‌ ಅವರು; “ಮೇಕೆದಾಟು ಕುಡಿಯುವ ನೀರಿನ ಯೋಜನೆ ಬಗ್ಗೆ ಕರ್ನಾಟಕ ಉಂಟು, ತಮಿಳುನಾಡು ಉಂಟು. ನೀವು ನೀವೇ ಮಾತನಾಡಿಕೊಳ್ಳಿ” ಎಂದು ಕೈ ಎತ್ತಿಬಿಟ್ಟಿದ್ದಾರೆ. ಹಾಗಾದರೆ, ಯೋಜನೆಗೆ ಒಪ್ಪಿಗೆ ನೀಡುವಲ್ಲಿ ಕೇಂದ್ರ ಸರಕಾರದ ಪಾತ್ರವೇ ಇಲ್ಲವೇ? ನಮ್ಮ ಪಾಲಿನ ನೀರನ್ನು ದಕ್ಕಿಸಿಕೊಳ್ಳುವುದು ಮತ್ತು ನಮ್ಮ ಜನರಿಗೆ ಕುಡಿಯುವ ನೀರು ಕೊಡುವ ಮೇಕೆದಾಟು ಯೋಜನೆ ಅನುಷ್ಠಾನ ಮಾಡುವುದು ಕರ್ನಾಟಕದ ಹಕ್ಕು. ಆದರೆ, ಕೇಂದ್ರ ಸಚಿವರು ʼನೀವೇ ಬಗೆಹರಿಸಿಕೊಳ್ಳಿʼ ಎಂದು ಹೇಳಿದ ಒಳಮರ್ಮವೇನು? ಕಾವೇರಿ ಬಗ್ಗೆ ಬಿಜೆಪಿ ʼಹೊಸ ವರಸೆʼ ಶುರು ಮಾಡಿತೇ ಎನ್ನುವ ಸಂಶಯ ನನ್ನದು.

ಈ ಬಗ್ಗೆ; 1,000 ಕೋಟಿ ಹಣ ಘೋಷಣೆ ಮಾಡಿದೊಡನೆ ಪಾದಯಾತ್ರೆಯಿಂದಲೇ ಆಯಿತು ಎಂದು ʼಹಿಗ್ಗಿ ಹೀರೆಕಾಯಿʼ ಆಗಿದ್ದ ಕಾಂಗ್ರೆಸ್‌ ನಿಲುವೇನು? ಅವರೀಗ ತಮ್ಮ ಮಿತ್ರಪಕ್ಷ ಡಿಎಂಕೆ ಅಧಿಕಾರದಲ್ಲಿರುವ ತಮಿಳುನಾಡು ಸರಕಾರದ ಜತೆ ಮಾತುಕತೆ ನಡೆಸಿ ಎಂದು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುತ್ತಾರಾ? ಎಂದು ಪ್ರಶ್ನಿಸಿದ್ದಾರೆ.


ಒಂದೇ ಬಾರಿ ಪೆಟ್ರೋಲ್, ಡಿಸೆಲ್ ಬೆಲೆ ಐತಿಹಾಸಿಕ ದಾಖಲೆ ಏರಿಕೆ ಸಾಧ್ಯತೆ: 2 -3 ದಿನದಲ್ಲೇ ಬಿಗ್ ಶಾಕ್ ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button