ಪ್ರಗತಿವಾಹಿನಿ ಸುದ್ದಿ: ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದು, ಇದೇ ವೇಳೆ ಹಲವು ನೂತನ ಸಂಸದರು ಕೂಡ ಕೇಂದ್ರ ಸಚಿವರಾಗಿ ಪದಗ್ರಹಣ ಮಾಡಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ದೇಶ-ವಿದೇಶಗಳ ಗಣ್ಯರ ಸಮ್ಮುಖದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಕ್ಯಾಬಿನೆಟ್ ಮಂತ್ರಿಯಾಗಿ, ಸರತಿಯಲ್ಲಿ 9ನೇಯವರಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದರು.
ಎಂಟು ಜನ ಬಿಜೆಪಿ ನಾಯಕರು ಪ್ರಮಾಣ ಸ್ವೀಕರಿಸಿದ ನಂತರ ಎನ್ ಡಿಎ ಒಕ್ಕೂಟದ ಮಿತ್ರಪಕ್ಷಗಳಲ್ಲಿ ಮೊದಲಿಗರಾಗಿ ಕುಮಾರಸ್ವಾಮಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಸಾಂಪ್ರದಾಯಿಕ ಬಿಳಿ ಅಂಗಿ-ಪಂಚೆ ಧರಿಸಿ ಪದಗ್ರಹಣ ಮಾಡಿದ್ದಾರೆ. ಕುಮಾರಸ್ವಾಮಿ ಪ್ರಮಣವಚನ ಸ್ವೀಕರಿಸಲು ವೇದಿಕೆ ಬರುತ್ತಿದ್ದಂತೆ ಕನ್ನಡದಲ್ಲಿ ಘೋಷಣೆಗಳು ಮೊಳಗಿದ್ದು ವಿಶೇಷ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ