ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಪಕ್ಷನಾಯಕನಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಎಂ.ಎಲ್.ಸಿ.ಆಯನೂರು ಮಂಜುನಾಥ್ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಕುಮಾರಸ್ವಾಮಿಯವರು ವಿಪಕ್ಷ ನಾಯಕನಾಗಿ ಆಯ್ಕೆಯಾಗುವ ನಿರೀಕ್ಷೆ ಇದೆ. ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿದಿದೆ. ಕಾಂಗ್ರೆಸ್ ನಾಯಕರೂ ಸಹ ಈ ಫಲಿತಾಂಶ ನಿರೀಕ್ಷಿಸಿರಲಿಲ್ಲ. ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಬಹಳ ಕಡಿಮೆ ಸ್ಥಾನ ದೊರೆತಿದೆ. ಆದರೂ ವಿರೋಧ ಪಕ್ಷದ ನಾಯಕರಾಗಿ ಕುಮಾರಸ್ವಾಮಿ ವಿಜೃಂಭಿಸುತ್ತಿದ್ದಾರೆ. ಜುಲೈ 28ರ ಬಳಿಕ ಅಧಿಕೃತವಾಗಿ ವಿಪಕ್ಷ ನಾಯಕರಾಗಿ ಆಯ್ಕೆ ನಿರೀಕ್ಷೆ ಇದೆ ಎಂದರು.
ಯಾರನ್ನು ಬಿಟ್ಟು ಬಂದೆವೋ ಅವರನ್ನೇ ಅಪ್ಪಿಕೊಳ್ಳುವ ಸಂದರ್ಭ ಬಂದಿದೆ ಎಂದು ಹೇಳುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಹುತೇಕ ಖಚಿತ ಎನ್ನುವ ಸುಳಿವು ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ