Kannada NewsKarnataka NewsLatestPolitics

*ಮಾಜಿ ಸಿಎಂ HDK ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೊಪ ಮಾಡಿ ಪೆನ್ ಡ್ರೈವ್ ಪ್ರದರ್ಶನ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ.

ಪೆನ್ ಡ್ರೈವ್ ಪ್ರದರ್ಶನ ಮಾಡಿದ್ದ ವಿಚಾರವಾಗಿ ವಕೀಲ ಅಮೃತೇಶ್ ಎಂಬುವವರು ವಿಧಾನಸೌಧ ಠಾಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ.

Home add -Advt

ಕೆಲ ದಿನಗಳ ಹಿಂದೆ ವಿಧಾನಸೌಧದ ಆವರಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಆರೋಪ ಮಾಡಿ, ಪೆನ್ ಡ್ರೈವ್ ಪ್ರದರ್ಶಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರಿಗೆ ಲೀಗಲ್ ನೋಟಿಸ್ ನೀಡಲಾಗಿತ್ತು. ಆದರೆ ಉತ್ತರ ನೀಡಿಲ್ಲ. ಪೆನ್ ಡ್ರೈವ್ ನ್ನು ಸ್ಪೀಕರ್ ಅಥವಾ ಪೊಲೀಸರಿಗೂ ಕೂಡ ಈವರೆಗೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಹೆಚ್.ಡಿ.ಕೆ ವಿರುದ್ಧ ಬ್ಲ್ಯಾಕ್ ಮೇಲ್, ಬೆದರಿಕೆ, ಅಪರಾಧಿಕ ಸಂಚು ಆರೋಪದಡಿ ದೂರು ದಾಖಲಿಸಿರುವ ಅಮೃತೇಶ್, ಪೆನ್ ಡ್ರೈವ್ ವಶಕ್ಕೆ ಪಡೆದು ಮಾಜಿ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.


Related Articles

Back to top button