Cancer Hospital 2
Beereshwara 36
LaxmiTai 5

*ನನ್ನ ಹಾಗೂ ನನ್ನ ಕುಟುಂಬದ ಎಲ್ಲರ ಫೋನ್ ಟ್ಯಾಪ್ ಮಾಡಿದ್ದಾರೆ: HDK ಆರೋಪ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಉದ್ದೇಶಪೂರ್ವಕವಾಗಿ ನಮ್ಮ ಕುಟುಬವನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನನ್ನ ಹಾಗೂ ನನ್ನ ಕುಟುಂಬದ ಎಲ್ಲರ ಫೋನ್ ಟ್ಯಾಪ್ ಮಾಡಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ, ನನ್ನ ಜೊತೆ ಇರುವ 45 ಜನರ ಫೋನ್ ಟ್ಯಾಪ್ ಮಾಡಲಾಗಿದೆ. ನಮ್ಮ ಕುಟುಂಬವನ್ನು ಮುಗಿಸಲು ಈ ರೀತಿ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದರು.

Emergency Service

ನಾನು ಅಕ್ರಮದ ಬಗ್ಗೆ ಮಾತನಾಡುತ್ತೇನೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ನಮ್ಮ ಕುಟುಂಬವನ್ನು ಮುಗಿಸಲು ಯತ್ನಿಸಿದ್ದಾರೆ ಎಂದು ಕಿಡಿಕಾರಿದರು.

ಈ ಎಲ್ಲಾ ಪ್ರಕರಣಗಳಿಂದ ನೊಂದು ಹೆಚ್.ಡಿ.ದೇವೇಗೌಡರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದರು. ಆಗ ಯಾರೋ ಮಾಡಿದ ತಪ್ಪಿಗೆ ನಿವ್ಯಾಕೆ ರಾಜೀನಾಮೆ ಕೊಡುತ್ತೀರಿ? ರಾಜೀನಾಮೆ ಕೊಡುವುದು ಬೇಡ ಎಂದು ನಾನು ಹೇಳಿದೆ ಎಂದಿದ್ದಾರೆ.

Bottom Add3
Bottom Ad 2