Karnataka NewsLatestPolitics

*ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪೋಸ್ಟಲ್ ವಾರ್*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತೆ ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ.

ಬಿಡದಿ ಮತ್ತು ಬೈರಮಂಗಲ ಸುತ್ತಮುತ್ತಲ ಪ್ರದೇಶಗಳಲ್ಲಿ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪೋಸ್ಟರ್‌ಗಳನ್ನು ಹಾಕಲಾಗಿದೆ. ಈ ಪೋಸ್ಟರ್‌ಗಳಲ್ಲಿ ಹಲಗೆವಡೇರಹಳ್ಳಿ ಮತ್ತು ಕೇತಗಾನಹಳ್ಳಿ ಭೂ ಹಗರಣದಲ್ಲಿ ಭಾಗಿಯಾದ ಆರೋಪವನ್ನು ಮಾಡಲಾಗಿದ್ದು, “ಜೈಲಿಗೆ ಹೋಗಲು ಸಿದ್ಧರಾಗಿ” ಎಂಬ ಸಂದೇಶವನ್ನು ಪ್ರದರ್ಶಿಸಲಾಗಿದೆ.

Home add -Advt

ಕಾಂಗ್ರೆಸ್ ಕಾರ್ಯಕರ್ತರು ಬ್ರದರ್ ಕುಮಾರಸ್ವಾಮಿ ಎಂದು ಸಂಬೋಧಿಸುತ್ತಾ, ಪಂಚಾಯತಿಯಿಂದ ವಿಧಾನ ಪರಿಷತ್ ಚುನಾವಣೆಯವರೆಗೆ ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಹೆಚ್.ಡಿ. ಕುಮಾರಸ್ವಾಮಿ ಎಂದು ಎಲ್ಲರಿಗೂ ಗೊತ್ತು ಎಂದೂ ಪೋಸ್ಟರ್‌ಗಳಲ್ಲಿ ಉಲ್ಲೇಖಿಸಲಾಗಿದೆ. ಪೋಸ್ಟರ್‌ಗಳಲ್ಲಿ ಹಾಸ್ಯ ಮಿಶ್ರಿತ ಸಂಭಾಷಣೆಯನ್ನೂ ಚಿತ್ರಿಸಲಾಗಿದೆ. ಈ ಪೋಸ್ಟರ್ ವಾರ್ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.

Related Articles

Back to top button