
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅಶ್ಲೀಲ, ಕೀಳು ಅಭಿರುಚಿಯ ಪೋಸ್ಟರ್ ಗಳನ್ನು ಗೋಡೆಗಳ ಮೇಲೆ ಅಂಟಿಸಿದ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಆಯುಕ್ತರಿಗೆ ಜೆಡಿಎಸ್ ಪಕ್ಷ ದೂರು ನೀಡಿದೆ.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ ಹಾಗೂ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ದಯಾನಂದ ಅವರಿಗೆ ದೂರು ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ