
ಪ್ರಗತಿವಾಹಿನಿ ಸುದ್ದಿ; ರಾಮನಗರ: 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಹಗರಣವನ್ನು ಪೊಲೀಸರೇ ಹೊರಗೆಳೆದಿದ್ದಾರೆ ಎಂದು ಮಾಜಿ ಸಿಎ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ನಾಯಕರು ನಿಷ್ಠಾವಂತ ಪೊಲೀಸ್ ಆಯುಕ್ತ ಕಮಲ್ ಪಂತ್ ವಿರುದ್ಧ ಆರೋಪ ಮಾಡಿದ್ದರು. ಹೀಗಾಗಿ ಪೊಲಿಸರೇ ಪಿಎಸ್ ಐ ನೇಮಕಾತಿ ಅಕ್ರಮದ ಹಗರಣವನ್ನು ಬಯಲಿಗೆಳೆದಿದ್ದಾರೆ ಎಂದರು.
ಪಿಎಸ್ ಐ ಅಕ್ರಮವನ್ನು ಸರ್ಕಾರ ಮುಚ್ಚಿ ಹಾಕಲು ಯತ್ನಿಸಿತ್ತು. ಚಾಮರಾಜಪೇಟೆಯಲ್ಲಿ ನಡೆದ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಿಷ್ನರ್ ಕಮಲ್ ಪಂತ್ ಸುಳ್ಳು ಹೇಳಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿ ಅವಮಾನಿಸಿದ್ದರು. ಉರ್ದು ಭಾಷೆ ವಿಚಾರವಾಗಿ ಕೊಲೆ ನಡೆದಿದೆ. ಕಮೀಷ್ನರ್ ಬೇರೆಯದೇ ಕಥೆ ಹೇಳಿದ್ದಾರೆ ಎಂದಿದ್ದರು. ಕಮಲ್ ಪಂತ್ ವೃತ್ತಿ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಹೀಗಿರುವಾಗ ಪಂತ್ ವಿರುದ್ಧ ಆರೋಪ ಮಾಡಿದ್ದಕ್ಕೆ ಹಗರಣ ಹೊರಬಂದಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಸಚಿವ ಅಶ್ವತ್ಥನಾರಾಯಣ ಬಗ್ಗೆ ಬಿಜೆಪಿ ನಾಯಕರೇ ಮಾಹಿತಿ ನೀಡಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಬೇಕು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಖು ಎಂದು ಆಗ್ರಹಿಸಿದರು.
ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಹುದ್ದೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ