Latest

ಬಿಜೆಪಿ-ಜೆಡಿಎಸ್ ಒಪ್ಪಂದವಾಗಿಲ್ಲ, ಆದರೆ…

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವೆ ಜೆಡಿಎಸ್, ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್, ಬಿಜೆಪಿ ಜೊತೆ ಯಾವುದೇ ಒಳ ಒಪ್ಪಂದ ಮಾಡಿಕೊಂಡಿಲ್ಲ. ಆದರೆ ಮಾಜಿ ಸಿಎಂ ಯಡಿಯೂರಪ್ಪ ಬಿಜೆಪಿಗೆ ಬೆಂಬಲ ನೀಡುವಂತೆ ಕೇಳಿರುವುದು ನಿಜ ಎಂದರು.

ನಮ್ಮ ಅಭ್ಯರ್ಥಿಗಳು 6 ಕಡೆ ಮಾತ್ರ ಸ್ಪರ್ಧಿಸಿದ್ದಾರೆ. ಉಳಿದ 19 ಕಡೆಗಳಲ್ಲಿ ನಮ್ಮ ಅಭ್ಯರ್ಥಿಗಳು ನಿಂತಿಲ್ಲ. ಹೀಗಾಗಿ ಯಡಿಯೂರಪ್ಪನವರು ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸದ ಕಡೆಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಕೇಳಿದ್ದಾರೆ. ಬಿಜೆಪಿ ಬೆಂಬಲಿಸುವ ಬಗ್ಗೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಹೇಳಿದರು.

ಇನ್ನು ಕಾಂಗ್ರೆಸ್ ನಾಯಕರು ಯಾವುದೇ ಬೆಂಬಲ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ ಕುಮಾರಸ್ವಾಮಿ, ಮುಂಬರುವ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಲಿದ್ದು, ಸ್ವತಂತ್ರವಾಗಿ ಸರ್ಕಾರ ತರುವ ಗುರಿ ಹೊಂದಿರುವುದಾಗಿ ತಿಳಿಸಿದರು.

Home add -Advt

ಶಿಕ್ಷಣ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟ

Related Articles

Back to top button