Election NewsPolitics

*ಚನ್ನಪಟ್ಟಣ ಟಿಕೆಟ್ ನಮಗೆ ಕೊಡ್ಬೇಕು ಎಂದ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣ ಉಪಚುನಾವಣಾ ಅಖಾಡ ರಂಗೇರಿದೆ. ಈಗಾಗಲೇ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಕ್ಕೆ ಬಿಜೆಪಿ ನಾಯಕರನ್ನು ಎನ್ ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಆದರೆ ಜೆಡಿಎಸ್-ಬಿಜೆಪಿ ನಾಯಕರ ನಡುವೆ ಟಿಕೆಟ್ ಗಾಗಿ ತೀವ್ರ ಪೈಪೋಟಿ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ವಿಳಂಬವಾಗಿದೆ. ಇಂದು ಸಂಜೆ ಅಥವಾ ನಾಳೆ ಎನ್ ಡಿಎ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ.

ಈ ನಡುವೆ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಚನ್ನಪಟ್ಟಣ ಕ್ಷೇತ್ರಕ್ಕೆ ಎನ್ ಡಿಎ ಅಭ್ಯರ್ಥಿ ಯಾರಾಗಲಿದ್ದಾರೆ ಕಾದುನೋಡಬೇಕಿದೆ. ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ನಮಗೆ ಯಾವುದೇ ಗೊಂದಲಗಳಿಲ್ಲ. ನ್ಯಾಯಯುತವಾಗಿ ನಮಗೆ ಟಿಕೆಟ್ ಸಿಗಬೇಕು ಎಂದರು.

ಕಾರಣ ಈಗಗಾಲೇ ಸಂಡೂರು ಹಾಗೂ ಶಿಗ್ಗಾಂವಿಗೆ ಬಿಜೆಪಿ ನಾಯಕರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಹಾಗಾಗಿ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ನಮಗೆ ಕೊಡಬೇಕು. ಯೋಗೀಶ್ವರ್ ಕೂಡ ನಿಲ್ಲಬೇಕು ಅಂತಿದ್ದಾರೆ. ಅಂತಿಮವಾಗಿ ಟಿಕೆಟ್ ಯಾರಿಗೆಸಿಗಲಿದೆ ಎಂಬುದು ಇಂದು ಸಂಜೆ ಘೋಷಣೆಯಾಗಲಿದೆ ಎಂದು ಹೇಳಿದರು.

https://pragativahini.com/bengalururainkarnataka


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button