ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರೆಂಟ್ ಬಿಲ್ ಕಟ್ಟಬೇಡಿ ಎಂದು ನಾವು ರಾಜ್ಯದ ಜನತೆಗೆ ಕರೆ ಕೊಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ವಿಳಂಬವಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಎಲ್ಲರಿಗೂ ಉಚಿತ ಎಂದು ಹೇಳಿದವರು ಈಗ ಗೈಡ್ ಲೈನ್ ಮಾಡ್ತೀವಿ ಅಂತಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಗ್ಯಾರಂಟಿಗಳು ಯಾವಾಗ ಕಾರ್ಯರೂಪಕ್ಕೆ ಬರುತ್ತೆ ಕಾದು ನೋಡೋಣ. ಚುನಾವಣೆ ವೇಳೆ ಹೇಳಿದ್ದೇ ಒಂದು ಈಗ ಹೇಳುತ್ತಿರುವುದೇ ಒಂದು. ಕರೆಂಟ್ ಬಿಲ್ ಕಟ್ಟಬೇಡಿ ಎಂದು ನಾವು ಕರೆ ಕೊಡುತ್ತೇವೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ